Regarding suspension of issuance of fresh notification for recruitment to posts in State Civil Services.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ..
ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ.
ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ, ಅಧಿಸೂಚನೆಯನ್ವಯವೇ ಪೂರ್ಣಗೊಳಿಸಬಹುದಾಗಿದೆ. ಮೇಲ್ಕಂಡ ಸೂಚನೆಗಳನ್ನು ಎಲ್ಲಾ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು
ಕಟ್ಟುನಿಟ್ಟಾಗಿ ಪಾಲಿಸತಕ್ಕದು ಎಂದು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here