UPSC Free Coaching 2024
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ. ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಬಗ್ಗೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ, ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ, . ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯ ವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.
ಯು.ಪಿ.ಎಸ್.ಸಿ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
👉ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ನವೆಂಬರ್ 30
👉SC-400 ಸ್ಪರ್ಧಾರ್ಥಿಗಳನ್ನು
ST-200 ಸ್ಪರ್ಧಾರ್ಥಿಗಳನ್ನು
ಸಾಮನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ
⚫ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30-11-2024.!!
👇🏻👇🏻👇🏻👇🏻👇🏻👇🏻👇🏻👇🏻
No comments:
Post a Comment
If You Have any Doubts, let me Comment Here