Bangalore City VAO 1:3 Document Verification List 2024
ಬೆಂಗಳೂರು ನಗರ ಜಿಲ್ಲೆ:
1,000 VAO ಹುದ್ದೆಗಳ ನೇಮಕಾತಿ: ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ 2025 ಜನವರಿ-06 ರಂದು ನಡೆಯುವ Document Verification ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.!!
:
2024 ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು.
ಉಲ್ಲೇಖ:
1. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಪತ್ರ ಸಂಖ್ಯೆ: ಇಡಿ/ಕೆಇಎ/ ದಿ/20/03/2023-24, 20ದಿ: 12.12.2024
2. ದಿ: 5.9 240 2.4 2022, ದಿ: 17.12.2024,
ಬೆಂಗಳೂರು ನಗರ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(1) ರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರುನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ. ಉಲ್ಲೇಖ(2) ರ ಸರ್ಕಾರದ ಪತ್ರದಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿರುತ್ತದೆ.
ಅದರಂತೆ ಬೆಂಗಳೂರು ನಗರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 32 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಆಯ್ಕೆ ಪಟ್ಟಿಯನ್ನು ಮೆರಿಟ್ ಆಧಾರದಲ್ಲಿ 1:3 ಅನುಪಾತದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ಈ ಕೆಳಗೆ ಕಾಣಿಸಿದ ಮೂಲ ದಾಖಲಾತಿಗಳೊಂದಿಗೆ ದಿನಾಂಕ: 06.01.2025 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ, ಕೆ.ಜಿ ರಸ್ತೆ, ಬೆಂಗಳೂರು - 560009, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಹಾಜರಾಗಲು ತಿಳಿಸಿದೆ.
1. ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ
2. ದ್ವಿತೀಯ ಪಿಯುಸಿ ಅಥವಾ ತತ್ಸಮಾನ - ಮೂಲ ಅಂಕಪಟ್ಟಿ
3. ಜಾತಿ ಮತ್ತು ಆದಾಯ ದೃಢೀಕರಣ ಪತ್ರ
4. ಗ್ರಾಮೀಣ ಅಭ್ಯರ್ಥಿ ದೃಢೀಕರಣ ಪತ್ರ
5. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ದೃಢೀಕರಣ ಪತ್ರ
6. ಮಾಜಿ ಸೈನಿಕರ ದೃಢೀಕರಣ ಪತ್ರ
7. ಅಂಗವಿಕಲತೆ ಕುರಿತ ವೈದ್ಯಕೀಯ ಪ್ರಮಾಣ ಪತ್ರ
8. ಸೇವೆಯಲ್ಲಿರುವ ಬಗ್ಗೆ ದೃಢೀಕರಣ ಪತ್ರ
9. ಗಣಕೀಕರಣ ಜ್ಞಾನ ಹೊಂದಿರವ ಬಗ್ಗೆ ಪ್ರಮಾಣ ಪತ್ರ
10. ಅರ್ಜಿ ಶುಲ್ಕ ಪಾವತಿಸಿರುವ ಬಗ್ಗೆ ಮೂಲ ಚಲನ್ / ಇ-ರಸೀದಿ ಪ್ರತಿ
11. 2 ಪಾಸ್ ಪೋರ್ಟ್ ಸೈಜಿನ ಫೋಟೋ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ನಕಲು.
12. ಆಧಾರ್ ಕಾರ್ಡ್
ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್
No comments:
Post a Comment
If You Have any Doubts, let me Comment Here