Government Employees Transfer CM Note
ಸರ್ಕಾರಿ ಇಲಾಖೆಯಲ್ಲಿನ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶವೊಂದನ್ನು ಹೊರಡಿಸಿದ್ದಾರೆ. ಇನ್ನುಮುಂದೆ ಸರ್ಕಾರದ ಯಾವುದೇ ಇಲಾಖೆಯಲ್ಲಿನ ವರ್ಗಾವಣೆಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ತಿಳಿಸಿದ್ದಾರೆ.
ಸಿಎಂ ಆದೇಶದಲ್ಲೇನಿದೆ..?: ಮುಖ್ಯಮಂತ್ರಿಯವರ ಟಿಪ್ಪಣಿ 2024 ರ ಜನವರಿ 3 ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂ: ಸಿಆಸುಇ 13 ಸೇನೌವ 2023, 2023ರ ಆಗಸ್ಟ್ 31 ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು ಎಂದು ಸೂಚಿಸಲಾಗಿದೆ.
ಒಂದು ವೇಳೆ ಪೂರ್ವಾನುಮೋದನೆಯನ್ನು ಪಡೆಯದೇ, ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದ್ದರೂ, ಸದರಿ ನಿರ್ದೇಶನವನ್ನು ಉಲ್ಲಂಘಿಸಿ, ಪದೇ ಪದೇ ಘಟನೋತ್ತರ ಅನುಮೋದನೆ ಕೋರಿ ಕಡತಗಳನ್ನು ಸಲ್ಲಿಸುತ್ತಿರುವುದನ್ನು ಗಮನಿಸಲಾಗಿದೆ.
ಆದುದರಿಂದ, ಸದರಿ ಸುತ್ತೋಲೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಯಾವುದೇ ವರ್ಗಾವಣೆ ಕಡತಗಳನ್ನು ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಇಲ್ಲದೆ ಹೊರಡಿಸಬಾರದೆಂದು ಹಾಗೂ ಇನ್ನು ಮುಂದೆ ಕಡತಗಳನ್ನು ಘಟನೋತ್ತರ ಅನುಮೋದನೆಗೆ ಮಂಡಿಸದಂತೆ, ಸ್ಪಷ್ಟವಾಗಿ ಎಲ್ಲಾ ಇಲಾಖಾ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಗಳಿಗೆ ಸೂಚಿಸುವಂತೆ ತಿಳಿಸಿದೆ.
No comments:
Post a Comment
If You Have any Doubts, let me Comment Here