Regarding conducting counseling for placing Group-B Head Teachers and equivalent cadre officers of the School Education Department in independent charge in the Education Officer cadre under KCRS Rule-32
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕನಾಸೇ ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಲು ಕೌನ್ಸಿಲಿಂಗ್ ನಡೆಸುವ ಬಗ್ಗೆ ಜ್ಞಾಪನ.
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್- ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕರ್ನಾಟಕ ನಾಗರಿಕ ಸೇವಾ ನಿಯಮ-32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಲು ಡಿ.21ರಂದು ಕೌನ್ಸೆಲಿಂಗ್ ನಡೆಸಲಾಗುತ್ತಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದಕ್ಕೆ ಅನುವಾಗುವಂತೆ ಖಾಲಿ ಇರುವ ಹುದ್ದೆಗಳನ್ನು ಪರಿಗಣನೆಗೆ ತೆಗೆದುಕೊಂಡು ಪ್ರಾಶಸ್ತ್ಯದಂತೆ ಹುದ್ದೆಗಳನ್ನು ಕೌನ್ಸೆಲಿಂಗ್ ನಡೆಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಲಾಗಿದೆ.
ಅದರನ್ವಯ ಪ್ರಸ್ತುತ ದಿನಾಂಕಕ್ಕೆ ಖಾಲಿ ಇರುವ ಹುದ್ದೆಗಳನ್ನು ಪರಿಗಣಿಸಿ ಆಯ್ಕೆ ಮಾಡಿಕೊಳ್ಳಲು ಡಿ.21ರಂದು ಬೆಳಗ್ಗೆ 10.30ಕ್ಕೆ ಶಿಕ್ಷಕರ ಸದನದಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅರ್ಹರು ಭಾವಚಿತ್ರ ಸಹಿತ ಗುರುತಿನ ಚೀಟಿಯೊಂದಿಗೆ ಹಾಜರಾಗಲು ಇಲಾಖೆ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.
No comments:
Post a Comment
If You Have any Doubts, let me Comment Here