JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, December 6, 2024

PDO Exam Guidelines 2024

  Jnyanabhandar       Friday, December 6, 2024
PDO Exam Guidelines 2024

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) 150 ಉಳಿಕೆ ಮೂಲ ವೃಂದದ ಗ್ರೂಪ್-'ಸಿ' ಹುದ್ದೆಗಳ ನೇಮಕಾತಿಗಾಗಿ ಇದೇ ಡಿಸೆಂಬರ್ 7 ಮತ್ತು 8ರಂದು ನಡೆಯಲಿದೆ.

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ (PDO Exam) ಪ್ರವೇಶ ಪತ್ರವನ್ನು ಕೆಪಿಎಸ್‌ಸಿ ಈಗಾಗಲೇ ಬಿಡುಗಡೆ ಮಾಡಿದೆ. ಇನ್ನು ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಆಯೋಗದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಡಿ.7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಡಿ.8 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.

ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ, ಮಾರ್ಗಸೂಚಿ
ಪರೀಕ್ಷೆ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳಾದ ಮೊಬೈಲ್‌, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್‌ಲೆಸ್‌ ಸೆಟ್ಸ್‌, ಪೇಪರ್, ಬುಕ್‌ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್‌ ಮತ್ತು ಯಾವುದೇ ಆಭರಣಗಳನ್ನು (ಮಂಗಳ ಸೂತ್ರ ಮತ್ತು ಕಾಲುಂಗುರವನ್ನು ಹೊರತುಪಡಿಸಿ), ಪುಲ್‌ವೋವರ್ಸ್‌, ಜಾಕೆಟ್‌ ಮತ್ತು ಸ್ವೆಟರ್ ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ.
ಪರೀಕ್ಷಾರ್ಥಿಗಳು ಮೆಟಲ್ ವಾಟರ್ ಬಾಟೆಲ್‌ ಅಥವಾ ನಾನ್‌ ಟ್ರಾನ್ಸ್‌ಪರೆಂಟ್ ವಾಟರ್ ಬಾಟಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಪರೀಕ್ಷಾರ್ಥಿಗಳು ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್‌ ಮಾಸ್ಕ್‌ ಅನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ.
ಪರೀಕ್ಷಾ ಕೇಂದ್ರದೊಳಗೆ ಹಾಜರಾಗುವ ಮುನ್ನ ಹ್ಯಾಂಡ್ ಹೆಲ್ಡ್‌ ಮೆಟಲ್ ಡಿಟೆಕ್ಟರ್ ಮುಖಾಂತರ ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳಿಂದ ಫ್ರಿಸ್ಕಿಂಗ್ ಕಾರ್ಯ ನೆರವೇರಿಸಲಾಗುತ್ತದೆ.
ಮೊಬೈಲ್ ಮತ್ತು ಇತರೆ ತಾಂತ್ರಿಕ (ಎಲೆಕ್ಟ್ರಾನಿಕ್) ವಸ್ತುಗಳಿಂದ ಪರೀಕ್ಷಾ ಉಪಕೇಂದ್ರದಲ್ಲಿ ಸಂವಹನ ನಡೆಸಲು ಅವಕಾಶವಾಗದಂತೆ ಜಾಮರ್ಸ್‌ ಅಳವಡಿಸಲಾಗುತ್ತಿದೆ.
ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗುತ್ತಿದೆ. ಪರೀಕ್ಷೆ ಸಮಯದಲ್ಲಿ ನಿರಂತರ ನಿಗವನ್ನು ಒಂದು ರೂಮ್‌ನಲ್ಲಿ ವಹಿಸಲಾಗುತ್ತಿದೆ.
ಪ್ರಥಮ ಬಾರಿಗೆ ಪರೀಕ್ಷಾ ಕೇಂದ್ರಗಳ ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಇದರಿಂದ ಅಭ್ಯರ್ಥಿಗಳ ಚಲನ-ವಲನ ಗಮನಿಸಲು, ದಾಖಲಿಸಲು ಉದ್ದೇಶಿಸಲಾಗಿದೆ.
ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹಂತದ ವೀಕ್ಷಕರನ್ನು ನೇಮಿಸಲು ಕ್ರಮವಹಿಸಲಾಗಿದೆ.
ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ. (ನಕಲು ಪ್ರತಿ ಅಥವಾ ಸ್ಕ್ಯಾನ್ ಮಾಡಿರುವ ಪ್ರತಿಯನ್ನು. ಅನುಮತಿಸಲಾಗುವುದಿಲ್ಲ.
ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. Personalized / Non- Personalized ಒಎಂಆರ್ ಉತ್ತರ ಹಾಳೆಯಲ್ಲಿನ ಎಲ್ಲಾ ನಮೂದು (Marking) ಗಳನ್ನು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಮಾಡತಕ್ಕದ್ದು.
logoblog

Thanks for reading PDO Exam Guidelines 2024

Previous
« Prev Post

No comments:

Post a Comment

If You Have any Doubts, let me Comment Here