Raichur University Assistant Professor Provisional Result List 2024
ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.
ನ.24ರಂದು ಪರೀಕ್ಷೆ ನಡೆದಿದ್ದು, ಅದಾದ 19 ದಿನಗಳಲ್ಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 16 ವಿಷಯಗಳ 24 ಹುದ್ದೆಗಳಿಗೆ ಒಟ್ಟು 1,175 ಮಂದಿ ಪರೀಕ್ಷೆ ಬರೆದಿದ್ದರು. ಅಷ್ಟೂ ಮಂದಿ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪಡೆದ ಅಂಕಗಳ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಡಿ.14ರೊಳಗೆ ಸಲ್ಲಿಸಬೇಕು. ಅಂಕಪಟ್ಟಿ ಜತೆಗೆ ಅಂತಿಮ ಕೀ ಉತ್ತರಗಳನ್ನೂ ಬಿಡುಗಡೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
No comments:
Post a Comment
If You Have any Doubts, let me Comment Here