S M Krishna Information in Kannada
ಕರ್ನಾಟಕದ ಮಾಜಿ ಮುಖ್ಯ ಮಂತ್ರಿಗಳು, ಮಹಾರಾಷ್ಟ್ರದ ಮಾಜಿ ರಾಜ್ಯಪಾಲರು, ಮಾಜಿ ವಿದೇಶಾಂಗ ಮಂತ್ರಿಯಾದ ಮಾನ್ಯ ಎಸ್.ಎಂ. ಕೃಷ್ಣ ಅವರು ದಿನಾಂಕ 10-12-2024ರಂದು ರಾತ್ರಿ 2:30 ಕ್ಕೆ ವಿಧಿವಶ.
ಎಸ್ ಎಮ್ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-೧೯೩೨) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.
ಎಸ್ ಎಂ ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು.
ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ವಿಧಾನ ಸಭೆಗೆ ಮೊದಲ ಬಾರಿ ೧೯೬೨ ರಲ್ಲಿ ಚುನಾಯಿತರಾದರು. ೧೯೬೮ರಲ್ಲಿ ಲೋಕಸಭೆಗೆ ಚುನಾಯಿತರಾದರು. ೧೯೭೧ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ ೧೯೭೨ ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ೧೯೮೩ರಲ್ಲು ಉದ್ಯಮ ಖಾತೆ ಮತ್ತು ೧೯೮೪ ರಲ್ಲಿ ವಿತ್ತ ಖಾತೆಯ ಸಚಿವರಾದರು. ೧೯೮೯ ರಿಂದ ೧೯೯೨ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ೧೯೯೨ ರಿಂದ ೧೯೯೪ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. ೧೯೯೬ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, ೧೯೯೯ ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ೧೯೯೯ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.
No comments:
Post a Comment
If You Have any Doubts, let me Comment Here