02-01-2025 Cabinet Meeting Highlights
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 02-01-2025ರಂದು ವರ್ಷದ ಮೊದಲ ಸಚಿವ ಸಂಪುಟ ಸಭೆಯ ನಡೆದಿದೆ. ಸಂಪುಟದಲ್ಲಿ ಕೈಗೊಂಡ ಪ್ರಮುಖ ನಿರ್ಣಗಳು ಹೀಗಿವೆ.
ರೂ.209 ಕೋಟಿ ವೆಚ್ಚದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣವನ್ನು ರೂ.84.57 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಸಂಪುಟದಲ್ಲಿ ಒಪ್ಪಿಗೆ
ನಾಲ್ಕು ಸಾರಿಗೆ ನಿಗಮಗಳಲ್ಲಿ ಬಸ್ ಪ್ರಯಾಣದ ದರ ಶೇ.15ರಷ್ಟು ಪರಿಷ್ಕರಣೆ ಮಾಡಲಾಗಿದೆ.
ರೂ.50 ಕೋಟಿ ವೆಚ್ಚದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಗಳ ಬಲವರ್ಧನೆಗೆ ತೀರ್ಮಾನ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಕಟ್ಟಡ ಕಾಮಗಾರಿಯನ್ನು ರೂ.149.75 ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
ರೂ.56.92 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರೂ.100 ಕೋಟಿ ವೆಚ್ಚದಲ್ಲಿ ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ 200 ಪಶು ವೈದ್ಯಕೀಯ ಸಂಸ್ಥೆಗಳಿಗೆ ನೂತನ ಕಟ್ಟಡಗಳ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here