BMTC RPC Conductor Provisional Selection List 2024
ಬಿಎಂಟಿಸಿಯ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಸಂಭವನೀಯ ಆಯ್ಕೆ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.
ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿರ್ವಾಹಕ (ಉಳಿಕೆ ಮೂಲ ವೃಂದದ) ಹುದ್ದೆಗೆ ಅಭ್ಯರ್ಥಿಗಳಿಗೆ ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಉಲ್ಲೇಖ-2ರಂತೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿತ್ತು ಎಂದಿದೆ.
ಅದರಂತೆ ಮೂಲ ದಾಖಲೆ / ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳ ಪೈಕಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳಿಗೆ ಅನುಗುಣವಾಗಿ ನಿರ್ವಾಹಕ, ದರ್ಜೆ-೩ (ಮೇಲ್ವಿಚಾರಕೇತರ) ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ.
ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಗುಂಪುವಾರು ಹಾಗೂ ಶೇಕಡವಾರು ಅಂಕಗಳಿಗಿಂತ ಹೆಚ್ಚಿನ ಅಂಕ ಗಳಿಸಿದಾಗ್ಯೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಅಭ್ಯರ್ಥಿಗಳು ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಅಧ್ಯಕ್ಷರು, ಆಯ್ಕೆ ಸಮಿತಿ, ಬೆ.ಮ.ಸಾ.ಸಂಸ್ಥೆ, ಕೇಂದ್ರ ಕಛೇರಿ, ಶಾಂತಿನಗರ ಬೆಂಗಳೂರು-560027 ಇಲ್ಲಿ ದಿನಾಂಕ:31/01/2025 ರ ಸಂಜೆ 17:30 ಗಂಟೆ ಒಳಗಾಗಿ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗಿ ಲಿಖಿತ ಆಕ್ಷೇಪಣೆ ಸಲ್ಲಿಸಬೇಕು. ದಿನಾಂಕ:31/01/2025 ರ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ.
No comments:
Post a Comment
If You Have any Doubts, let me Comment Here