Government Employees leave Information
ರಾಜ್ಯ ಸರ್ಕಾರಿ ನೌಕರರು ರಜೆ ಮೇಲೆ ತೆರಳುವ ಮುನ್ನ ಕಡ್ಡಾಯವಾಗಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಗೌರವಾನ್ವಿತ ಮಾನ್ಯ ಉಚ್ಚ ನ್ಯಾಯಾಲಯವು ಸರ್ಕಾರಿ ನೌಕರರು ರಜೆ ಪಡೆಯದೆ ಅನಧಿಕೃತವಾಗಿ ಕೆಲಸಕ್ಕೆ ಗೈರಾಗುವುದು ದುರ್ನಡತೆ ತೋರಿದಂತೆ, ಹಾಗಾಗಿ ಅಂತಹ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಮತ್ತು ಉದ್ಯೋಗಕ್ಕೆ ಹಾಜರಾಗಬೇಕಾದ ಸಮಯದಲ್ಲಿ ಸಕಾರಣವಿಲ್ಲದೆ ಗೈರಾಗಬಾರದು ಎಂಬ ಹೊಣೆಗಾರಿಕೆ ಉದ್ಯೋಗಿ ಮೇಲಿರುತ್ತದೆ.
ರಜೆ ಮಂಜೂರಾಗದೆ ಗೈರಾಗುವುದನ್ನು ಹಕ್ಕು ಎಂದು ಉದ್ಯೋಗಿಗಳು ಪರಿಗಣಿಸಬಾರದು. ಕಚೇರಿಗೆ ಅನಧಿಕೃತವಾಗಿ ಗೈರುಹಾಜರಾಗುವ ತಪ್ಪಿತಸ್ಥ ಉದ್ಯೋಗಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು ಸಮರ್ಥನೀಯವಾಗಿದೆ ಎಂದು ಅಭಿಪ್ರಾಯ ಪಟ್ಟಿರುತ್ತದೆ ಎಂದಿದೆ.
ಆದುದರಿಂದ, ಈ ಸಚಿವಾಲಯದ ಎಲ್ಲಾ ಅಧಿಕಾರಿ/ನೌಕರರುಗಳು ರಜೆ ಮೇಲೆ ತೆರಳುವ ಮುನ್ನ ಕಡ್ಡಾಯವಾಗಿ ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆದು ರಜೆ ಮೇಲೆ ತೆರಳಬೇಕೆಂದು, ಒಂದು ವೇಳೆ ಕಚೇರಿಗೆ ಅನಧಿಕೃತವಾಗಿ ಅಧಿಕಾರಿ/ನೌಕರರುಗಳು ಗೈರುಹಾಜರಾದಲ್ಲಿ ಅಂತಹ ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ತಿಳಸಲಾಗಿದೆ ಎಂದು ಹೇಳಿದ್ದಾರೆ.
No comments:
Post a Comment
If You Have any Doubts, let me Comment Here