Guest Lecturer Recruitment 2024
ರಾಜ್ಯದಲ್ಲಿ ಇರುವ ಅತಿಥಿ ಉಪನ್ಯಾಸಕರ ನೇಮಕಾತಿ ಅರ್ಜಿ ಆಹ್ವಾನ ಮಾಡಿದೆ.
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೋರ್ಟ್ ತೀರ್ಪಿನ ಪ್ರಕಾರ ಯುಜಿಸಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅನುಗುಣವಾಗಿ ನೇಮಕಾತಿ ನಡೆಯಲಿದೆ.
ಜನವರಿ-ಫೆಬ್ರವರಿಯಲ್ಲಿ 2,4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಲಭ್ಯವಿರುವ ಕಾರ್ಯಭಾರಕ್ಕೆ ತಕ್ಕಂತೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಲಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.3ರಿಂದ 8ವರೆಗೆ ಅವಕಾಶವಿದೆ. ಜ.9ರಂದು ತಾತ್ಕಾಲಿಕ
ಮೆರಿಟ್ ಪಟ್ಟಿ ಪ್ರಕಟಿಸಲಿದೆ. ಇದಾದ ಬಳಿಕ ತಿದ್ದುಪಡಿಗೆ ಜ.10ರಿಂದ 11ರವರೆಗೆ ಅವಕಾಶವಿರಲಿದೆ. ಜ.13ರಂದು ತಾತ್ಕಾಲಿಕ ಕಾರ್ಯಭಾರ ಪ್ರಕಟ ಮಾಡಲಿದ್ದು, ಜ.20ರಿಂದ 29ರವರೆಗೆ ಮೆರಿಟ್ ಪಟ್ಟಿಯ ಅನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್ ನಡೆಯಲಿದೆ. ಜ.30ರಂದು ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಿದೆ. ಹೆಚ್ಚಿನ ಮಾಹಿತಿಗೆ http://dce.karnataka.gov.in ನೋಡಬಹುದು.
ಆರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
3-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
8-01-2025.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here