Hasan District VAO Final Selection list 2024
ಹಾಸನ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ-2024 ರ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಕುರಿತು.
ಉಲ್ಲೇಖ:-
1. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಸಂಖ್ಯೆ: 22/2/3/4/04/2023-24, 2: 02/02/2024.
2. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ಸಂ:
ಇಡಿ/ಕೆಇಎ/ಆಡಳಿತ/ಸಿಆರ್/04/2023-24, ದಿನಾಂಕ: 12/12/2024.
3. ಸರ್ಕಾರದ ಪತ್ರ ಸಂಖ್ಯೆ: ಕಂಇ/240/ಬಿಎಸ್‌ಸಿ/2022, ದಿನಾಂಕ: 17/12/2024.
4. ಈ ಕಛೇರಿಯ ಸಮಸಂಖ್ಯೆ ಅಧಿಸೂಚನೆ ದಿನಾಂಕ: 23/12/2024.
5. ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 179 ಸೇನನಿ 2020, ದಿನಾಂಕ:
06/07/2021.
6. ಈ ಕಛೇರಿಯ ಸಮಸಂಖ್ಯೆ ಅಧಿಸೂಚನ ದಿನಾಂಕ: 15/01/2025.
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 54 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ರವರ ಉಲ್ಲೇಖ (1) ರ ಅಧಿಸೂಚನೆಯಂತೆ ಪರೀಕ್ಷೆ ನಡೆಸಿ, ಉಲ್ಲೇಖ (2) ರಂತೆ ಅಂತಿಮ ಆಯ್ಕೆ ಪಟ್ಟಿಗೆ ಅರ್ಹರಾದ ಅಭ್ಯರ್ಥಿಗಳ ವಿವರಗಳನ್ನು ನೀಡಲಾಗಿರುತ್ತದೆ. ಉಲ್ಲೇಖ (3) ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ 54 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಸಾಮಾನ್ಯ ಸೇವೆಗಳು (ರೆವಿನ್ಯೂ ಸಬಾರ್ಡಿನೇಟ್ ಬ್ರಾಂಚ್) (ಕೇಡರ್ ಅಂಡ್ ರಿಕ್ರೂಟ್ ಮೆಂಟ್) ನಿಯಮಗಳು 2008 ಮತ್ತು ತಿದ್ದುಪಡಿ ನಿಯಮಗಳು 2009 ರನ್ವಯ ಉಲ್ಲೇಖ (2) ರ ಅಂತಿಮ ಆಯ್ಕೆಪಟ್ಟಿ ಪ್ರಕಟಣೆಯಲ್ಲಿ ಲಭ್ಯವಿರುವ ಒಟ್ಟು ಅಭ್ಯರ್ಥಿಗಳಿಂದ 1:3 ಅನುಪಾತದ ಪ್ರಮಾಣದಲ್ಲಿ ಪರಿಶೀಲನಾ ಪಟ್ಟಿಯನ್ನು ಉಲ್ಲೇಖ (4) ರ ಈ ಕಛೇರಿಯ ಅಧಿಸೂಚನೆಯಂತೆ ಪ್ರಕಟಿಸಲಾಗಿರುತ್ತದೆ.
ಸದರಿ ಪ್ರಕಟಿಸಲಾದ ಅಧಿಸೂಚನೆಯಂತೆ ದಿನಾಂಕ: 10/01/2025 ರಂದು ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆಯಿಂದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕ ಮತ್ತು ಮೀಸಲಾತಿ ಆಧಾರದಲ್ಲಿ ಉಲ್ಲೇಖ (6) ರ ದಿನಾಂಕ: 15/01/2025 ರಂದು 53 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ 26 ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ತಯಾರಿಸಿ ಪ್ರಕಟಿಸಲಾಗಿರುತ್ತದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಒಟ್ಟು 04 ಅಭ್ಯರ್ಥಿಗಳ 08 ಆಕ್ಷೇಪಣಾ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಆಕ್ಷೇಪಣಾ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು, 04 ಅಭ್ಯರ್ಥಿಗಳು ನೀಡಿರುವ 08 ಆಕ್ಷೇಪಣಾ ಅರ್ಜಿಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ. ಅದರಂತೆ, ಸದರಿಯವರಿಗೆ ಹಿಂಬರಹ ನೀಡಲಾಗಿದೆ.
ಅದರಂತೆ 53 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಈ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುತ್ತದೆ.
ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ ಅಭ್ಯರ್ಥಿಗಳು ದಿನಾಂಕ: 03/02/2025 ರಂದು ಸಂಜೆ 5.00 ಗಂಟೆಯೊಳಗಾಗಿ ಮೂಲ ದಾಖಲಾತಿಗಳನ್ನು ಖುದ್ದಾಗಿ ಹಾಸನ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಸೂಚಿಸಿದೆ. ಮೂಲ ದಾಖಲಾತಿಗಳನ್ನು ಈ ಕಛೇರಿಗೆ ನಿಗದಿತ ದಿನಾಂಕದೊಳಗೆ ಹಾಜರುಪಡಿಸದ ಅಭ್ಯರ್ಥಿಯ ಆಯ್ಕೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು.
No comments:
Post a Comment
If You Have any Doubts, let me Comment Here