KSET 2024 Document verification schedule and Instructions
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಅರ್ಹತಾ ಪರೀಕ್ಷೆಗೆ ಪ್ರಾಧಿಕಾರವು ದಿನಾಂಕ: 13.07.2024 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ದಿನಾಂಕ: 28.08.2024 ರವರೆಗೆ ಸ್ವೀಕರಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲಾದ ಅಭ್ಯರ್ಥಿಗಳಿಗೆ ದಿನಾಂಕ 24.11.2024 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 ನಡೆಸಲಾಗಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ವರದಿಯನ್ನು ಆಧಾರಿಸಿ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 16.12.2024 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳ ಅಂಕಗಳು ಮತ್ತು ಮೀಸಲಾತಿಯನ್ವಯ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಆಧರಿಸಿ ಮೂಲ ದಾಖಲೆಗಳ ಪರಿಶೀಲನೆಯ ವೇಳಾ ಪಟ್ಟಿಯನ್ನು ಅನುಬಂಧ-1 ರಲ್ಲಿ ನೀಡಲಾಗಿದೆ. ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆಯನ್ನು ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯದಂದು ಆವಶ್ಯಕ ದಾಖಲೆಗಳೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಸೂಚಿಸಿದೆ.
ದಾಖಲಾತಿ ಪರಿಶೀಲನೆಗೆ ಹಾಜರಾಗುವ ಕೆಸೆಟ್-2024ರ ಅಭ್ಯರ್ಥಿಗಳಿಗೆ ಮಾರ್ಗಸೂಚಿಯನ್ನು ಅನುಬಂಧ-2 ರಲ್ಲಿ ನೀಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.
ಸೂಚನೆ, ವೇಳಾಪಟ್ಟಿ ತಿಳಿಯಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here