Regarding filling up of teaching posts vacant due to death, resignation and other reasons in private aided high schools of the state
ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ ರಾಜೀನಾಮೆ, ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01-0-2016 ರಿಂದ 31-12-2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ.
ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ.
ತಂತ್ರಾಂಶವು ಕೆಳಗಿನ ಪಟ್ಟಿಯಲ್ಲಿರುವ 6 ಹಂತಗಳನ್ನು ಒಳಗೊಂಡಿದೆ ಎಂದಿದ್ದಾರೆ.
No comments:
Post a Comment
If You Have any Doubts, let me Comment Here