Regarding the fixing of fees for correction in the Second PUC mark sheets.
ದ್ವಿತೀಯ ಪಿ.ಯು.ಸಿ ಅಂಕಪಟ್ಟಿಗಳಲ್ಲಿನ ತಿದ್ದುಪಡಿಗೆ ಶುಲ್ಕ ನಿಗದಿಪಡಿಸುವ ಬಗ್ಗೆ..
ಉಲ್ಲೇಖ:-1) ಸರ್ಕಾರದ ಆದೇಶ ಸಂಖ್ಯೆ ಇಡಿ 195. ಡಿಜಿಡಿ.2017 ಬೆಂಗಳೂರು, ದಿನಾಂಕ: 20-03-2018
2) ಹಿರಿಯ ಸಹಾಯಕ ನಿರ್ದೇಶಕರು, ಪಿ. ಯು. ಅಂಕಪಟ್ಟಿ ಶಾಖೆ, ಕ.ಶಾ.ಪ ಮತ್ತು ಮೌ.ನಿ.ಮಂಡಲಿ, ಬೆಂಗಳೂರು ರವರ ಟಿಪ್ಪಣಿ ಸಂಖ್ಯೆ:- ಡಿಎಂಸಿ/ತಂ.ದೋ.ಷ.ಸ/17/2023-24 2:19-11-2024.
3) ಮಂಡಲಿಯ ಇ-ಕಛೇರಿ ಕಡತ ಸಂಖ್ಯೆ 46440 ರಲ್ಲಿ ಅನುಮೋದಿಸಿರುವಂತೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ-2ರ ಟಿಪ್ಪಣಿಯಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ ಅಂಕಪಟ್ಟಿಯೊಂದಿಗೆ ಸಲ್ಲಿಸಲಾಗುತ್ತಿದ್ದು, ಸದರಿ ಅಂಕಪಟ್ಟಿಯಲ್ಲಿ ತಿದ್ದುಪಡಿಗಳಿಗೆ ಯಾವುದೇ ಶುಲ್ಕ ನಿಗದಿಯಾಗಿರುವುದಿಲ್ಲ. ಈ ಮೇಲಿನ ತಿದ್ದುಪಡಿಗಳನ್ನು ಮಾಡುವ ಸಂದರ್ಭಗಳಲ್ಲಿ ಅಭ್ಯರ್ಥಿಯು ಸಲ್ಲಿಸಿರುವಂತಹ ಮೂಲ ಅಂಕಪಟ್ಟಿಯಲ್ಲಿಯೇ ಬೆರಳಚ್ಚು ಯಂತ್ರದ ಮೂಲಕ ತಿನ್ನುಪಡಿ ಮಾಡಿ ಶಾಖೆಯ ಹಿರಿಯ ಸಹಾಯಕ ನಿರ್ದೇಶಕರಿಂದ ದೃಢಿಕರಿಸಲಾಗುತ್ತಿದೆ. ಆದರೆ ಕೆಲವು ಅಭ್ಯರ್ಥಿಗಳು ಮೂಲ ಅಂಕಪಟ್ಟಿಗಳಲ್ಲಿ ತಿದ್ದುಪಡಿಯಾಗಿರುವುದನ್ನು ಕೆಲವು ಸಂಸ್ಥೆ/ಇಲಾಖೆಗಳಲ್ಲಿ ಒಪ್ಪದ ಕಾರಣ ಮೂಲ ಅಂಕಪಟ್ಟಿಯನ್ನು ಹಿಂದಿರುಗಿಸಿ ಪ್ರತಿಗಾಗಿ ಪ್ರಸ್ತಾವನೆಗಳನ್ನು ಮಂಡಲಿಗೆ ಸಲ್ಲಿಸಲಾಗುತ್ತಿದೆ. ಅಲ್ಲದೆ, ಭಾವಚಿತ್ರ ತಿದ್ದುಪಡಿಗಳಿಗೆ CORRECTED COPY ಎಂದು ಮುದ್ರಿಸಿ ನೀಡಲಾಗುತ್ತಿದ್ದು, ಇದೇ ಮಾದರಿಯಲ್ಲಿ ಪ್ರಸಕ್ತ ಮತ್ತು ಹಿಂದಿನ ಎಲ್ಲಾ ವರ್ಷಗಳ ಅಂಕಪಟ್ಟಿ, ತಿದ್ದುಪಡಿಗಳಿಗೆ ಶುಲ್ಕವನ್ನು ನಿಗದಿಪಡಿಸಿ, ಅಂಕಪಟ್ಟಿಗಳನ್ನು ನೀಡುವ ಬಗ್ಗೆ ಮಂಡಲಿಯಿಂದ ಆದೇಶವನ್ನು ಹೊರಡಿಸಲು ಕ್ರಮ ಕೈಗೊಳ್ಳಲು ಕೋರಿರುವುದನ್ನು ಕೂಲಂಕುಷವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ ಹಾಗೂ ಮಾಧ್ಯಮ ತಿದ್ದುಪಡಿ ಮಾಡುವ ಸಂಬಂಧ ಈ ಕೆಳಕಂಡಂತೆ ಆದೇಶಿಸಿದೆ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here