Postponement of the UGC NET December 2024 Examination scheduled on 15th January 2025-reg
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ನಿರ್ಧಾರ ಕೈಗೊಂಡಿದ್ದು, ಜನವರಿ 15 ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಮಕರ ಸಂಕ್ರಾಂತಿ ಮತ್ತು ಪೊಂಗಲ್ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಇತರ ಸುಗ್ಗಿಯ ಹಬ್ಬಗಳ ಕಾರಣ ನೆಟ್ ಪರೀಕ್ಷೆಯ ದಿನಾಂಕವನ್ನು ಮುಂದೂಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದ ಕೆಲವು ದಿನಗಳ ನಂತರ NTA ಈ ನಿರ್ಧಾರ ಕೈಗೊಂಡಿದೆ.
No comments:
Post a Comment
If You Have any Doubts, let me Comment Here