Central Government Budget Highlights
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
`ಐತಿಹಾಸಿಕ ಬಜೆಟ್' ನ ಹೈಲೆಟ್ಸ್ ಹೀಗಿದೆ
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
"ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.
MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. "ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು" ಎಂದು ಅವರು ಹೇಳುತ್ತಾರೆ.
ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.
"ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ" ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ಶೂರೆನ್ಸ್ ವಲಯಗಳಲ್ಲಿ ಎಫ್ ಡಿಐ ಹೆಚ್ಚಳ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲೂ ಇಂಡಿಯಾ ಪೋಸ್ಟ್ ಪೇಮೆಂಟ್ ಜಾರಿಗೆ ತಲಾಗುವುದು ಎಂದು ತಿಳಿಸಿದ್ದಾರೆ.
ವಿಮಾ ವಲಯದ ಎಫ್‌ಡಿಐ ಮಿತಿಯನ್ನು ಶೇ. 74 ರಿಂದ 100 ಕ್ಕೆ ಹೆಚ್ಚಿಸಲಾಗುವುದು. ಈ ವರ್ಧಿತ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೈಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುವುದು ಮತ್ತು ಸರಳಗೊಳಿಸಲಾಗುವುದು" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಗಳ ಬೆಲೆ ಇಳಿಕೆ ಮಾಡಲಾಗುವುದು, ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 1.5 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮೊಬೈಲ್, ಚರ್ಮದ ಉತ್ಪನ್ನಗಳು, ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಳ, ಎಲೆಕ್ಟ್ರಿಕ್ ಕಾರುಗಳ ಬೆಲೆಗಳನ್ನು ಇಳಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ
2025 ರ ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ರಿಯಾಯಿತಿ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, "ಹೊಸ ತೆರಿಗೆ ಪದ್ಧತಿಯಡಿಯಲ್ಲಿ ₹7,00,000 ವರೆಗೆ ಒಟ್ಟು ಆದಾಯ ಹೊಂದಿರುವ ನಿವಾಸಿ ವ್ಯಕ್ತಿಗಳು ಯಾವುದೇ ತೆರಿಗೆಯನ್ನು ಪಾವತಿಸುವುದಿಲ್ಲ" ಎಂದು ಹೇಳಿದರು. "ಹೊಸ ಪದ್ಧತಿಯಡಿಯಲ್ಲಿ ನಿವಾಸಿ ವ್ಯಕ್ತಿಗಳಿಗೆ ರಿಯಾಯಿತಿಯನ್ನು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ, ಇದರಿಂದಾಗಿ ಅವರ ಒಟ್ಟು ಆದಾಯ ₹12,00,000 ವರೆಗೆ ಇದ್ದರೆ ಅವರು ತೆರಿಗೆ ಪಾವತಿಸುವುದಿಲ್ಲ." "ಹೊಸ ತೆರಿಗೆ ಪದ್ಧತಿಯಡಿಯಲ್ಲಿ ಈ ಹಿಂದೆ ಒದಗಿಸಲಾದ ಕನಿಷ್ಠ ಪರಿಹಾರವು ₹12,00,000 ಕ್ಕಿಂತ ಸ್ವಲ್ಪ ಹೆಚ್ಚಿನ ಆದಾಯಕ್ಕೂ ಅನ್ವಯಿಸುತ್ತದೆ.
No comments:
Post a Comment
If You Have any Doubts, let me Comment Here