Haveri District VAO Final Selection List 2024
ವಿಷಯ
: ಹಾವೇರಿ ಜಿಲ್ಲೆ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಯ ನೇರ ನೇಮಕಾತಿಯ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸುವ ಕುರಿತು.
ಹಾವೇರಿ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.
ಅದರಂತೆ ಹಾವೇರಿ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 34 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1438 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1438 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಹಾವೇರಿ ಜಿಲ್ಲಾ ವೆಬ್ ಸೈಟ್ haveri.nic.in ರಲ್ಲಿ ಉಲ್ಲೇಖ-2 ಪ್ರಕಟಿಸಿದ್ದು ಇರುತ್ತದೆ.
ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಪರಿಶೀಲನೆಗೆ ದಿನಾಂಕ: 07-01-2025 ರಂದು ಹಾಜರಾಗಿ, ಅಭ್ಯರ್ಥಿಗಳು ದಾಖಲೆಗಳನ್ನು ಹಾಜರಪಡಿಸಿದ್ದು ಇರುತ್ತದೆ.
1:3 ಅನುಪಾತದಲ್ಲಿ ಪರಿಗಣಿಸಲ್ಪಟ್ಟ ಒಟ್ಟು 99 ಅಭ್ಯರ್ಥಿಗಳ ಪೈಕಿ 1:1 ಅನುಪಾತದಲ್ಲಿ ಒಟ್ಟು 34 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 43 ಸೇವನೆ 2020 ದಿ:
05.03.2021 ರಲ್ಲಿ ತಿಳಿಸಿದಂತೆ ಅಭ್ಯರ್ಥಿಗಳ 1:1 ಪಟ್ಟಿಯಲ್ಲಿರುವ ಒಟ್ಟು ಅಭ್ಯರ್ಥಿಗಳ, 75% ರಷ್ಟು ಮೀರದಂತೆ ಒಟ್ಟು 26 ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಗೆ ಆಯ್ಕೆ ಮಾಡಲಾಗಿದೆ, ಹಾವೇರಿ ಜಿಲ್ಲಾ ವೆಬ್ ಸೈಟ್ haveri.nic.in ರಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಿದ್ದು ದಿನಾಂಕ:16.01.2025 ರಿಂದ 23.01.2025 ರ ಕಛೇರಿಯ ಅವಧಿಯೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿ ಪಟ್ಟಿ ಪ್ರಕಟಿಸಲಾಗಿರುತ್ತದೆ
ಅಭ್ಯರ್ಥಿಗಳ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಯನ್ನು ನಿಗಧಿತ ಅವಧಿಯೊಳಗಾಗಿ 08 ಅರ್ಭಥಿ್ರಗಳು ಸಲ್ಲಿಸಿರುತ್ತಾರೆ ಆಕ್ಷೇಪಣೆಗಳನ್ನು ಪರಿಗಣಿಸಿ ನಿಯಮಾನುಸಾರ ಕ್ರಮವಹಿಸಿ ಅರ್ಜಿದಾರರಿಗೆ ಹಿಂಬರಹ ನೀಡಲಾಗಿದೆ,
ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಹಾಗೂ ನೇರ ಮಿಸಲಾತಿ (Vertical reservation) ಹಾಗೂ ಸಮತಳ ಮಿಸಲಾತಿಗಳ (horizontal reservation) ಆಧಾರದ ಮೇಲೆ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 01 ಸೆಹಿಮ 2022 ಮತ್ತು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 02 ಸೆಹಿಮ 2023 ದಿನಾಂಕ:08.03.2023 ನೇದರ ಉಲ್ಲೇಖಗಳಲ್ಲಿ ಕಾಣಿಸಿರುವ ಸರ್ಕಾರದ ಆದೇಶಗಳನುಗುಣವಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಸಮತಳ ಮೀಸಲಾತಿಯನ್ನು ಪುನಃ ನಿಯಮಾನುಸಾರ ಪರಿಶೀಲಿಸಿ ಸಮತಳ ಮಿಸಲಾತಿಗಳ (horizontal reservation) ಆಧಾರದ ಮೇಲೆ ಗ್ರಾಮ ಆಡಳಿತ ಅಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಅಂತಿಮ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಒಂದು ವೇಳೆ ಅಂತಿಮ ಆಯ್ಕೆಪಟ್ಟಿಯಲ್ಲಿನ ಅಭ್ಯರ್ಥಿಗಳು ಸೇವೆಗೆ ಹಾಜರಾಗದೆ ಗೈರು ಉಳಿದ ಪಕ್ಷದಲ್ಲಿ ಅಂತಿಮ ಹೆಚ್ಚುವರಿ ಆಯ್ಕೆ ಪಟ್ಟಿಯ ಅಭ್ಯರ್ಥಿಗಳನ್ನು ನಿಯಮಾನುಸಾರ ಪರಿಗಣಿಸಲಾಗುವುದು ಆಯ್ಕೆ ಪಟ್ಟಿಯಲ್ಲಿ ಹೆಸರು ಇದ್ದ ಮಾತ್ರಕ್ಕೆ ಅಭ್ಯರ್ಥಿಗಳಿಗೆ ನೇಮಕಾತಿಯ ಬಗ್ಗೆ ಯಾವುದೇ ಹಕ್ಕು ಪ್ರಾಪ್ತವಾಗುವುದಿಲ್ಲ
ಆಯ್ಕೆ ಪಟ್ಟಿ ಡೌನ್ಲೋಡ್
No comments:
Post a Comment
If You Have any Doubts, let me Comment Here