MAINS NOTIFICATION FOR THE POST OF GAZETTED PROBATIONERS 2023-24(TOTAL 384 POST) DATED 13-02-2025
2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ
(Mains Examination) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ;
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮಗಳು, 1997 ಮತ್ತು ಕಾಲಾಕಾಲಕ್ಕೆ ತಿದ್ದುಪಡಿಯಾದ ನಿಯಮಗಳನ್ವಯ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 509 ಇ(1)/2023-24, ದಿನಾಂಕ:26-02-2024ರಂದು ಅಧಿಸೂಚಿಸಲಾದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ - ಎ ಮತ್ತು ಗ್ರೂಪ್ - ಬಿ ವೃಂದದ 384 ಹುದ್ದೆಗಳಿಗೆ ದಿನಾಂಕ:29-12-2024ರಂದು ಪೂರ್ವಭಾವಿ ಮರುಪರೀಕ್ಷೆಯನ್ನು ನಡೆಸಲಾಗಿರುತ್ತದೆ, ಆಯೋಗವು ಸದರಿ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ:10-02-2025ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಮುಖ್ಯ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅವಧಿ
👉ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವ ಪ್ರಾರಂಭದ ದಿನಾಂಕ
17-02-2025
👉ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-03-2025
ಅರ್ಜಿ ಸಲ್ಲಿಸುವ ವಿಧಾನ
ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಮಾತ್ರ ಅತೀ ಜಾಗರೂಕತೆಯಿಂದ ಎಲಾ.. ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳು ಸೂಚನೆಗಳನ್ನು ಹಂತಹಂತವಾಗಿ ಓದಿಕೊಳ್ಳತಕ್ಕದ್ದು. ಎಲ್ಲಾ ಸೂಚನೆಗಳನ್ನು ಓದಿದ ನಂತರವೇ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here