ಪ್ರತಿವರ್ಷ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. 1999ರಿಂದ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಷ್ಟ್ರೀಯ ವಿಜ್ಞಾನ ದಿನದಂದು ಚರ್ಚಿಸಲಾಗುವ ವಿಷಯವನ್ನು ಮೊದಲೇ ಘೋಷಿಸುತ್ತದೆ.
ಏನಿದು ರಾಷ್ಟ್ರೀಯ ವಿಜ್ಞಾನ ದಿನ?
ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಸರ್ ಸಿ.ವಿ.ರಾಮನ್ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ರಾಮನ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಸಭಾಂಗಣದಲ್ಲಿ ಕ್ರಿ.ಶ.1928ರ ಫೆಬ್ರವರಿ 28ರಂದು ಬೆಳಕಿನ ಚದುರಿವಿಕೆಯಲ್ಲಿ ಸಾಮಗ್ರಿಗಳ ಗುಣಲಕ್ಷ ಣಗಳ ಪರಿಣಾಮದ ಬಗ್ಗೆ ಹೊಸ ಹೊಳಹೊಂದನ್ನು ಪ್ರತಿಪಾದಿಸಿದ ದಿನ. ಮುಂದಿನ ದಿನಗಳಲ್ಲಿ ಅದು ರಾಮನ್ ಪರಿಣಾಮವೆಂದೇ ಪ್ರಸಿದ್ಧವಾಯಿತು. ಈ ಹಿನ್ನೆಲೆಯಲ್ಲಿ 1987 ಫೆಬ್ರವರಿ 28ರಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.
ಪ್ರತಿವರ್ಷ ಒಂದೊಂದು ಘೋಷವಾಕ್ಯದಡಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ.
ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ, ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ನಾನಾ ಚಟುವಟಿಕೆಗಳನ್ನು ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ.
ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯದ ಮೊತ್ತಮೊದಲ ವಿಜ್ಞಾನ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ.ವಿ. ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ . ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ 1888ರ ನವೆಂಬರ್ 7ರಂದು . ಅವರ ತಂದೆ ಚಂದ್ರಶೇಖರ್ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ರಾಮನ್ ಅವರು ಕಲ್ಕತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಮುಂದೆ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವ ಉದ್ದೇಶ
ಜನರ ದೈನಂದಿನ ಜೀವನದಲ್ಲಿ ವೈಜ್ಞಾನಿಕ ಅನ್ವಯದ ಮಹತ್ವದ ಬಗ್ಗೆ ಸಂದೇಶವನ್ನು ಹರಡಲು ಪ್ರತಿ ವರ್ಷ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ.
ಮಾನವ ಕಲ್ಯಾಣಕ್ಕಾಗಿ ವಿಜ್ಞಾನ ಕ್ಷೇತ್ರದಲ್ಲಿನ ಎಲ್ಲಾ ಚಟುವಟಿಕೆಗಳು, ಪ್ರಯತ್ನಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸಲು.
ವಿಜ್ಞಾನದ ಅಭಿವೃದ್ಧಿಗಾಗಿ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಹೊಸ ತಂತ್ರಜ್ಞಾನವನ್ನು ಅನ್ವಯಿಸಲು.
ದೇಶದ ವೈಜ್ಞಾನಿಕ ಮನೋಭಾವದ ನಾಗರಿಕರಿಗೆ ಅವಕಾಶ ಕಲ್ಪಿಸುವುದು.
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವುದರ ಜೊತೆಗೆ ಜನರನ್ನು ಉತ್ತೇಜಿಸಲು.
No comments:
Post a Comment
If You Have any Doubts, let me Comment Here