Regarding the distribution of only eggs or bananas as supplementary nutrition to students studying in government and aided schools under the mid-day meal scheme in the state.
ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಬಗ್ಗೆ ಸರ್ಕಾರದ ಆದೇಶ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (4)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರ ಪತ್ರದಲ್ಲಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ (Unsaturated fats) ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದ್ದು, ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment
If You Have any Doubts, let me Comment Here