Regarding issuance of guidelines regarding withdrawal of amount in NPS PRAN account of government employees covered by Defence Pension Scheme from National Pension Scheme.
ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕುರಿತು ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ.
ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.
ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.
ಓದಲಾದ ಕ್ರಮ ಸಂಖ್ಯೆ(3)ರ ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿರುತ್ತದೆ.
ಪ್ರಸ್ತುತ ಮೇಲಿನ ದಿನಾಂಕ: 24.01.2024ರ ಸರ್ಕಾರಿ ಆದೇಶದನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಸ್ ಪಿಂಚಿಣಿ ಯೋಜನೆಯ ವ್ಯಾಪ್ತಿಗೊಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿನ ನೌಕರರ ಮತ್ತು ಸರ್ಕಾರದ ವಂತಿಗೆಯನ್ನು ಹಿಂಪಡೆಯುವ ಕುರಿತು ಹಾಗೂ ಸಂಬಂಧಿತ ಸರ್ಕಾರಿ ನೌಕರರಿಗೆ ಜಿ.ಪಿ.ಎಫ್. ಖಾತೆಯನ್ನು ತೆರೆಯುವುದು ಮುಂತಾದ ವಿಷಯಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಆದೇಶ.
ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023, ಬೆಂಗಳೂರು, ದಿನಾಂಕ:14.2.2025.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ನಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡುವ ಸೇವೆಯಲ್ಲಿರುವ/ನಿವೃತ್ತಿ ಹೊಂದಿದ/ಮರಣ ಹೊಂದಿದ ಅರ್ಹ ಸರ್ಕಾರಿ ಅಧಿಕಾರಿ/ನೌಕರರ ಪ್ರಾನ್ ಖಾತೆಯಲ್ಲಿರುವ ಮೊತ್ತವನ್ನು ಹಿಂಪಡೆಯಬೇಕಾಗಿರುವುದರಿಂದ ಈ ಕುರಿತು ವಿವಿಧ ಹಂತಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಸಂಬಂಧಪಟ್ಟವರ ಜವಾಬ್ದಾರಿಗಳನ್ನು ಈ ಕೆಳಕಂಡಂತೆ ನಿಗಧಿಪಡಿಸಿದೆ:
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here