Shivamogga District VAO Final Selection List 2024
2024ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತಿದ್ದು, ಅಂತಿಮ ಆಯ್ಕೆ ಪಟ್ಟಿ ಪ್ರಚುರಪಡಿಸುತ್ತಿರುವ ಕುರಿತು.
ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಖಾಲಿ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಈ ಕಾರ್ಯಾಲಯಕ್ಕೆ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಿ ಉಲ್ಲೇಖ (1) ರಂತೆ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಅದರಂತೆ ಉಲ್ಲೇಖ (2)ರ ಪತ್ರದಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ. ಪೂರ್ಣ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿ ನಿರ್ವಹಿಸುವಂತೆ ಸೂಚಿಸಿರುತ್ತಾರೆ.
ಈ ಜಿಲ್ಲೆಗೆ ಅನುಮೋದನೆ ಆಗಿರುವ 31 ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ 1288 ಅಭ್ಯರ್ಥಿಗಳ ಪೈಕಿ ಒಟ್ಟು 1:3 ಅನುಪಾತದಂತೆ 89 ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಉಲ್ಲೇಖ (3) ರಂತೆ ಪ್ರಕಟಿಸಿ. ಉಲ್ಲೇಖ (4)ರಂತೆ ಅರ್ಹ ಅಭ್ಯರ್ಥಿಗಳಿಗೆ ತಿಳುವಳಿಕೆ ನೀಡಿ, ದಿನಾಂಕ:06.01.2025 ಮತ್ತು 07.01.2025ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಿದ್ದು, ದಾಖಲೆಗಳ ಪರಿಶೀಲನೆಗೆ 89 ಅರ್ಹ ಅಭ್ಯರ್ಥಿಗಳ ಪೈಕಿ ಒಟ್ಟು ಅರ್ಹ 81 ಅಭ್ಯರ್ಥಿಗಳು ದಾಖಲೆಗಳೊಂದಿಗೆ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಕಛೇರಿ, ಶಿವಮೊಗ್ಗ ಇಲ್ಲಿಗೆ ಹಾಜರಾಗಿರುತ್ತಾರೆ.
08 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ.
ಕೋಷ್ಟಕ-3 ರಲ್ಲಿನ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕೋಷ್ಟಕ-4 ರಲ್ಲಿನ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಿರುದ್ಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:23.01.2025 ರ ಒಳಗೆ ಜಿಲ್ಲಾಧಿಕಾರಿಗಳ ಕಛೇರಿ, ಶಿವಮೊಗ್ಗ ಇಲ್ಲಿ ಖುದ್ದಾಗಿ ಆಕ್ಷೇಪಣೆಯನ್ನು ಸಲ್ಲಿಸುವಂತೆ ಹಾಗೂ ಸದರಿ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಉಲ್ಲೇಖ(5) ರಂತೆ ತಿಳಿಸಲಾಗಿತ್ತು. ಸದರಿ ಅವಧಿಗೆ ಈ ಕಾರ್ಯಾಲಯಕ್ಕೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗಿರುವುದಿಲ್ಲ.
ಪ್ರಯುಕ್ತ, ಉಲ್ಲೇಖ (2)ರ ನಿರ್ದೇಶನದಂತೆ ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಿದೆ. ಸದರಿ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
No comments:
Post a Comment
If You Have any Doubts, let me Comment Here