D.V.Gundappa Birth Anniversary
*ಮಾರ್ಚ್ 17-ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದ, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ನಾಡಿನ ನಭೋಮಂಡಲದಲ್ಲಿ ಸದಾ ಬೆಳಗುತ್ತಿರುವ ಧ್ರುವತಾರೆ ಡಾ. ಡಿ ವಿ ಗುಂಡಪ್ಪ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು:*
ಮಧ್ಯಕಾಲೀನ ಕವಿ, ತತ್ವಜ್ಞಾನಿ ಮತ್ತು ಪ್ರಸಿದ್ಧ ಪುಸ್ತಕ ಮಂಕುತಿಮ್ಮನ ಕಗ್ಗದ ಲೇಖಕರನ್ನು ನೆನಪಿಸಿಕೊಳ್ಳುವ ಸಂದರ್ಭ.
ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.
ಡಿ.ವಿ.ಜಿ ಅವರು ಮಾರ್ಚ್ 17,1887 ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು.
*#ಸಾಹಿತ್ಯ ಕೃಷಿ:*
ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು.
ವಿದ್ವಾಂಸರು, ಪತ್ರಿಕಾಸಂಪಾದಕರು, ಸಾಹಿತ್ಯ ವಿದ್ವಾಂಸರ ನಿಕಟ ಪರಿಚಯವಿದ್ದ ಡಿ.ವಿ. ಗುಂಡಪ್ಪನವರು ೧೯೩೩ರಲ್ಲಿ ಪರಿಷತ್ತಿಗೆ ಅಧ್ಯಕ್ಷರಾಗಿ ಬಂದ ಮೇಲೇ ಪರಿಷತ್ತಿಗೆ ನವದೆಸೆ ಉಂಟಾಯಿತು. ಪರಿಷತ್ತಿಗೆ ಭವ್ಯವಾದ ಶ್ರೀಕೃಷ್ಣರಾಜಪರಿಷ್ಮನಂದಿರ ಕಟ್ಟಡ ನೆಲೆಯಾಗಿ ಸಿಕ್ಕಿತು. ಪರಿಷತ್ತಿನ ಕಾರ್ಯಾಲಯವನ್ನು ಸುವ್ಯವಸ್ಥೆಗೊಳಿಸಿದರು. ಪ್ರತಿವಾರವೂ ಪರಿಷತ್ತಿನಲ್ಲಿ ಸಾರ್ವಜನಿಕವಾಗಿ ಭಾಷಣ, ಕಾವ್ಯವಾಚನ ಇತ್ಯಾದಿ ನಡೆಯತೊಡಗಿತು.
ಪರಿಷತ್ತು ಜನಪ್ರಿಯವಾಗಲು ಹೆಚ್ಚು ಹೆಚ್ಚು ಜನರು ಸದಸ್ಯರಾಗಬೇಕು ಎಂಬುದು ಡಿವಿಜಿ ಅವರ ಆಶಯವಾಗಿತ್ತು. ಅದಕ್ಕಾಗಿ ಸದಸ್ಯರ ಸಂಖ್ಯೆ ಹೆಚ್ಚಿಸಿದರು.
ಸಂಸ್ಥೆಯ ನಿಬಂಧನೆ ಎಂಬುದು ಸಂಸ್ಥೆಗೆ ದಿಕ್ಸೂಚಿ – ಅಂಕುಶವಿದ್ದಂತೆ. ಅದು ಸಕಾಲಿಕವಾಗಿರಬೇಕು, ಸಮರ್ಪಕವಾಗಿರಬೇಕು, ಮತ್ತು ಸಮಗ್ರವಾಗಿರಬೇಕು ಎಂದು ಅದುವರೆಗೆ ಹಲವಾರು ವಾರ್ಷಿಕಾಧಿವೇಶನಗಳಲ್ಲ್ಲಿ ಆಗಿದ್ದ ನಿಬಂಧನೆಯ ತಿದ್ದುಪಡಿಗಳನ್ನೆಲ್ಲ ಸೇರ್ಪಡೆ ಮಾಡಿ ಒಂದೂಗೂಡಿಸಿ ನಿಬಂಧನಾವಳಿಯನ್ನು ಪ್ರಕಟಿಸಿದರು.
ಕನ್ನಡ ಕಾವ್ಯಗಳು ಜನರಲ್ಲಿ ಪ್ರಚಾರವಾಗಬೇಕಾದರೆ ಗಮಕ ಕಲೆಯೊಂದೇ ದಾರಿ. ಗಮಕವಾಚನದಿಂದಲೇ ಹಳಗನ್ನಡ ನಡುಗನ್ನಡ ಕಾವ್ಯಗಳು ಜನಕ್ಕೆ ತಲುಪಲು ಸಾಧ್ಯ. ಗ್ರಂಥಗಳ ಮೂಲಕ ಜನಸಾಮಾನ್ಯರಿಗೆ ಕಾವ್ಯ ತಲುಪುವುದಿಲ್ಲ. ಕಾವ್ಯ ದೊರೆತರೂ ಜನಸಾಮಾನ್ಯರೂ ಅರ್ಥೈಸಿಕೊಳ್ಳಲಾರರು, ಆನಂದಿಸಲಾರರು. ಗಮಕವಾಚನ ವ್ಯಾಖ್ಯಾನ ಕಾರ್ಯಕ್ರಮದಿಂದ ಅದು ಸಾಧ್ಯ ಎಂದು ನಂಬಿದ್ದರು. ಡಿ.ವಿ.ಜಿ. ಅದಕ್ಕಾಗಿ ಪರಿಷತ್ತಿನಲ್ಲಿ ಗಮಕ ತರಗತಿಗಳನ್ನು ಪ್ರಾರಂಭಿಸಿದರು. ಗಮಕಿಗಳು ತಯಾರಾಗತೊಡಗಿದರು. ಈ ತರಗತಿಗಳಿಂದ ಉತ್ತೀರ್ಣರಾಗಿ ಬಂದವರಲ್ಲಿ ನಾಡಿನ ಪ್ರಸಿದ್ದ ಗಮಕ ಕಲಾವಿರಾದ ಶಕುಂತಲಾ ಬಾಯಿ, ಬಿಂದೂರಾವ್ ಅವರೂ ಸೇರಿದ್ದಾರೆ. ಅನೇಕ ಪ್ರಖ್ಯಾತ ಗಮಕಿಗಳು ಬಿಂದೂರಾಯರ ಶಿಷ್ಯರು ಎಂಬುದು ಗಮನಾರ್ಹ ಸಂಗತಿಯಾಗಿದೆ.
ಯುವರಾಜ ಕಂಠೀರವ ನರಸಿಂಹರಾಜ ಒಡೆಯರ್ ಪರವಾಗಿ ಪರಿಷತ್ತಿನ ಕಾರ್ಯಗಳನ್ನು ನಿರ್ವಹಿಸಿದವರು ೨ನೇ ಉಪಾಧ್ಯಕ್ಷರಾದ ಡಿ. ವಿ. ಗುಂಡಪ್ಪನವರು. ೧೯೩೩ರಲ್ಲಿ ಪರಿಷತ್ತಿನ ಉಪಾಧ್ಯಕ್ಷರಾಗಿ ಡಿವಿಜಿ ಅವರು ಆಯ್ಕೆಗೊಂಡರು.
#ಅಕ್ಟೋಬರ್ 07,1975 ರಂದು ಡಿ ವಿ ಜಿ ನಿಧನರಾದರು.
No comments:
Post a Comment
If You Have any Doubts, let me Comment Here