Karnataka SSLC Annual EXAM 1 Admit Card 2025
2025ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಣೆ ಕುರಿತು ಸುತ್ತೋಲೆ.
ಈ ಬಗ್ಗೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 10.03.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್ ಲೋಡ್ ಮಾಡಲಾಗುವುದು.
ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು.
1. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಕೂಡಲೇ ಮಂಡಲಿಗೆ ಕಳುಹಿಸಿಕೊಡುವುದು.
2. ಒಂದು ವೇಳೆ CCERF ವಿದ್ಯಾರ್ಥಿ CCEPF ಆಗಿದ್ದು, ಅಥವಾ CCEPF ವಿದ್ಯಾರ್ಥಿ CCERF ಆಗಿದ್ದು ಹೀಗೆ ವಿದ್ಯಾರ್ಥಿಯ ವಿಧ ಬದಲಾಗಿದ್ದಲ್ಲಿ ಅಂತಹ ಪುವೇಶ ಪತ್ರಗಳನ್ನು ಸೂಕ್ತ ದಾಖಲೆಗಳ ಸಮರ್ಥನೆಯೊಂದಿಗೆ ತಿದ್ದುಪಡಿಗಾಗಿ ಮಂಡಲಿಗೆ ಕಳುಹಿಸಿಕೊಡುವುದು.
3. ಉಲ್ಲೇಖಿತ-2ರ ಅಧಿಸೂಚನೆಯಲ್ಲಿ ವಿವರಿಸಿರುವಂತೆ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ/ವಿನಾಯಿತಿ ನೀಡುವ ಸಂಬಂಧ ಉಪನಿರ್ದೇಶಕರ ಜ್ಞಾಪನದನ್ವಯ ದೈಹಿಕ ಸ್ಥಿತಿ, ಭಾಷಾ ವಿನಾಯಿತಿ, ಬದಲಿ ವಿಷಯಗಳ ಮಾಹಿತಿಗಳು ಪುವೇಶ ಪತ್ರದಲ್ಲಿ ಮುದ್ರಿತವಾಗಿರುವ ಬಗ್ಗೆ ಮುಖ್ಯಶಿಕ್ಷಕರು ಖಚಿತಪಡಿಸಿಕೊಳ್ಳುವುದು. ಇಲ್ಲವಾದಲ್ಲಿ ಉಪನಿರ್ದೇಶಕರ [ಆಡಳಿತ]ರವರ ಜ್ಞಾಪನದ ಪ್ರತಿಯನ್ನು ದೃಢೀಕರಿಸಿ ಸಮರ್ಥನೆಯೊಂದಿಗೆ ಸಂಬಂಧಿಸಿದ ಶಾಖಾಧಿಕಾರಿಗಳಿಗೆ ಕಳುಹಿಸಿ ವಿನಾಯಿತಿ ಪಡೆದುಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here