Direct admission for special category students of 6th class
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ 6ನೇ ತರಗತಿಗೆ ದಾಖಲಾತಿ ಮಾಡುವ ಕುರಿತು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಆಂಗ್ಲ ಮಾಧ್ಯಮದಲ್ಲಿ ಉಚಿತವಾಗಿ ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಕ್ರೈಸ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾಗಾಂಧಿ/ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ಶ್ರೀ ನಾರಾಯಣ ಗುರು ಇತ್ಯಾದಿ ಹೆಸರಿನ ಒಟ್ಟು 817 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ವಸತಿ ಶಾಲೆಗಳ ಪ್ರಾರಂಭಿಕ ತರಗತಿಯಾದ 6ನೇ ತರಗತಿಗೆ 2025-26 ನೇ ಸಾಲಿನ ಪ್ರವೇಶಕ್ಕಾಗಿ ಸರ್ಕಾರದ ಆದೇಶಗಳನ್ನಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.
ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಒಟ್ಟು 41500 ಸ್ನಾನಗಳು ಲಭ್ಯವಿರುತ್ತವೆ ಸದರಿ ಸ್ನಾನಗಳಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಶೇ.50 ರಷ್ಟು (20750) ಸ್ನಾನಗಳನ್ನು ಪ್ರವೇಶ ಪರೀಕ್ಷೆ ಮೂಲಕ ದಾಖಲಾತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾದಿಂದ ದಿನಾಂಕ : 15.02.2025 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದೆ ಹಾಗೂ ಉಳಿದ ಶೇ.50 ರಷ್ಟು (20750) ಸ್ನಾನಗಳನ್ನು ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ ಮಾಡಿಕೊಳ್ಳಲು ಈ ಕೆಳಕಂಡಂತೆ ಅವಕಾಶವನ್ನು ಕಲ್ಪಿಸಲಾಗಿದೆ.
ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ.
ಹೆಚ್ಚಿನ ಅಧಿಕೃತ ಮಾಹಿತಿಗಾಗಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here