KREIS/EMRS-2025 District-wise Final Marks and Merit List
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
2025ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಹಾಗು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 15/02/2025 ರಂದು ನಡೆಸಿ, ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 07/03/2025 ರಂದು ಪ್ರಕಟಿಸಿ ದಿನಾಂಕ 13/03/2025ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅದರಂತೆ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳನ್ನು ಜಿಲ್ಲಾವಾರು ಪಟ್ಟಿಯನ್ನು ಸಿದ್ದಪಡಿಸಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 14/03/2025 ರಂದು ಪ್ರಕಟಿಸಿದೆ.
ಆನ್‌ಲೈನ್ ಸೀಟು ಹಂಚಿಕೆ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಮತ್ತು ಆಯಾ ಇಲಾಖೆಯ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವುದು.
No comments:
Post a Comment
If You Have any Doubts, let me Comment Here