KSET-2023 and 2024 DOCUMENT VERIFICATION FOR KSET-2023 CANDIDATES ON 04-04-2025.
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ K-SET-2023 & K-SET-2024 ಕ್ಕೆ ಸಂಬಂಧಿಸಿದಂತೆ 2025 ಏಪ್ರಿಲ್-04 ರಂದು Document Verification ಗೆ ಹಾಜರಾಗಲು KEA ಇದೀಗ ಸೂಚಿಸಿದೆ.!!
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ 20.01.2025 ರ ವರೆಗೆ ಮತ್ತು 31.01.2025 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ. ಆದ್ದರಿಂದ ದಿನಾಂಕ 13.01.2025 005 20.01.2025 5 2 31.01.2025 ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರಿದ್ದು ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 04.04.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.
ಶೈಕ್ಷಣಿಕ ಅರ್ಹತೆ ಮತ್ತು ಮೀಸಲಾತಿ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲಾತಿ ಪ್ರಮಾಣ ಪತ್ರಗಳ ವಿವರಗಳಿಗೆ ದಿನಾಂಕ 13.07.2024 ರ ಅಧಿಸೂಚನೆಯನ್ನು ಮತ್ತು ದಿನಾಂಕ 09.01.2025 ರ ಮಾರ್ಗಸೂಚಿಯನ್ನು ಓದಿಕೊಳ್ಳಲು ಸೂಚಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳು, ತಮ್ಮ ಮೀಸಲಾತಿಗೆ ಸಂಬಂಧಿಸಿದಂತೆ ನಿಗದಿತ ನಮೂನೆಯಲ್ಲಿ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ಪ್ರವರ್ಗದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
ವಿವಾಹಿತ ಮಹಿಳಾ ಅಭ್ಯರ್ಥಿಗಳು (ಕೆಸೆಟ್-2024ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 2ಬಿ, 3ಎ, 3ಬಿ ಮೀಸಲಾತಿ ಕೋರಿರುವವರು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ
No comments:
Post a Comment
If You Have any Doubts, let me Comment Here