KREIS Morarji Desai 6th Class Entrance EXAM Result 2025
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಗಳ 2025-26ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟಗೊಂಡಿವೆ.
2024-25 ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಬರುವ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 15.02.2025 ರಂದು ನಡೆಸಿ, ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು
ದಿನಾಂಕ 24/02/2025 ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ ದಿನಾಂಕ 25.02.2025 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಸದರಿ ಪರೀಕ್ಷೆಯ ಅಂತಿಮ ಕೀ
ಉತ್ತರಗಳನ್ನು ಹಾಗೂ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಅಭ್ಯರ್ಥಿಗಳ
ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 13.03.2025ರ ಮಧ್ಯಾಹ್ನ 12.00 ರೊಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಿದೆ. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಹಾಗೂ ಕೀ ಉತ್ತರಗಳ ಸಂಬಂಧ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ.
ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿ ನೋಡಲು ನಿಮಗೆ ಬೇಕಾದ ಜಿಲ್ಲೆಯನ್ನು ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here