JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, March 8, 2025

Regarding computerizing and finalizing the service details of teaching officers/non-teaching employees in the EEDS software

  Jnyanabhandar       Saturday, March 8, 2025
Regarding computerizing and finalizing the service details of teaching officers/non-teaching employees in the E.EDS software,

ವಿಷಯ:- ಇ ಇಡಿ.ಎಸ್ ತಂತ್ರಾಂಶದಲ್ಲಿ ಶಿಕ್ಷಕರ ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ಸುತ್ತೋಲೆ.

ಈ ಮೇಲಿನ ಸುತ್ತೋಲೆ ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಎಲ್ಲಾ ಅಧಿಕಾರಿಗಳ ಮಾಹಿತಿಯ ಇಂದೀಕರಣಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಲಾಗಿತ್ತು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇಇಡಿ.ಎಸ್ ನಲ್ಲಿ ಇರುವ ಸೇವಾ ಮಾಹಿತಿಯು ಅಂತಿಮವಾಗಿರುವುದರಿಂದ ಈ ಕೆಳಕಂಡ ಅಂಶಗಳ ಸೇವಾ ವಿವರಗಳನ್ನು ನಿಖರವಾಗಿ ಇ ಇಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ದಿನಾಂಕ:15/03/2025 ರೊಳಗೆ ಅಂತಿಮಗೊಳಿಸಲು ಆಯಾ ಬಟವಾಡೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಶಿಕ್ಷಕರ ಕ್ರಮಬದ್ಧವಾದ ಪ್ರಥಮ ಕೆ.ಜಿ.ಐ.ಡಿ ಸಂಖ್ಯೆ ನಮೂದಾಗಿರುವ ಬಗ್ಗೆ ಪರಿಶೀಲಿಸುವುದು. ತಂತ್ರಾಂಶದ ವರದಿಗಳನ್ನು ಗಮನಿಸಿದಂತೆ ಕೆಲವು ಪ್ರಕರಣಗಳಲ್ಲಿ ಎರಡೆರಡು ಕೆ.ಜಿ.ಐ.ಡಿ ಸಂಖ್ಯೆಗಳನ್ನು ನಮೂದಿಸಿ ಸೇವಾ ವಿವರಗಳನ್ನು ಅಂತಿಮಗೊಳಿಸಿರುವುದು ಕಂಡುಬಂದಿರುತ್ತದೆ. ಇದು ಸಾಕಷ್ಟು ಗೊಂದಲಗಳಿಗೆ ಅವಕಾಶ ಮಾಡಿಕೊಡುವುದರಿಂದ ಪ್ರತಿಯೊಬ್ಬ ಶಿಕ್ಷಕರ ಮೊದಲನೇ ಕೆ.ಜಿ.ಐ.ಡಿ ಸಂಖ್ಯೆಯಡಿ ಸೇವಾ ವಿವರಗಳನ್ನು ಅಂತಿಮಗೊಳಿಸಿ ಉಳಿದ


ವಿವರಗಳನ್ನು ತಂತ್ರಾಂಶದಿಂದ ತೆಗೆದು ಹಾಕಲು ಕ್ರಮವಹಿಸುವುದು.

2. ಶಿಕ್ಷಕರ ಹೆಸರು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಕ್ರಮಬದ್ಧವಾಗಿರುವ ಬಗ್ಗೆ ಪರಿಶೀಲಿಸುವುದು. ಕನ್ನಡ ಹಾಗೂ ಆಂಗ್ಲ ಹೆಸರುಗಳನ್ನು ಇ.ಇ.ಡಿ.ಎಸ್ ನಲ್ಲಿ ತಪ್ಪಾಗಿ ನಮೂದಿಸಿದ್ದು ತಿದ್ದುಪಡಿಗಾಗಿ ಹೆಚ್ಚಿನ ಅರ್ಜಿಗಳು ತಾಲ್ಲೂಕು/ಜಿಲ್ಲಾ ಹಂತದಿಂದ ಈ ಕಛೇರಿಗೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಶಿಕ್ಷಕರ ಸೇವಾವಹಿ ಹಾಗೂ 2.2.2 ಅಂಕಪಟ್ಟಿಯಲ್ಲಿರುವಂತೆ ಸರಿಯಾದ ಮಾಹಿತಿಯನ್ನು ಇಂದೀಕರಿಸುವುದು. ಇನ್ನು ಮುಂದೆ ಇಂತಹ ಅರ್ಜಿಗಳು ಸಲ್ಲಿಕೆಯಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು.

3. ಶಿಕ್ಷಕರ ಜನ್ಮ ದಿನಾಂಕ. ಸೇವೆಗೆ ಸೇರಿದ ದಿನಾಂಕ. ಪ್ರಸ್ತುತ ವೃಂದಕ್ಕೆ ಸೇರಿದ ದಿನಾಂಕ ಮುಂತಾದ ಅಂಶಗಳು ಕ್ರಮಬದ್ಧವಾಗಿ ನಮೂದಾಗಿರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವುದು. ಕೆ.ಜಿ.ಐ.ಡಿ. ಸಂಖ್ಯೆಗಳ ತಿದ್ದುಪಡಿಗೆ ಅರ್ಜಿಸಲ್ಲಿಕೆಯಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು.

4 ಶಿಕ್ಷಕರ ಸೇವಾ ವಿವರದಲ್ಲಿ ಯಾವುದೇ ಅಂಕಣ ಖಾಲಿ ಉಳಿಯದಂತೆ ಭರ್ತಿ ಮಾಡಲು ಕ್ರಮವಹಿಸುವುದು

5. ಅನುದಾನಿತ ಶಾಲಾ ಶಿಕ್ಷಕರನ್ನು ಸರ್ಕಾರಿ ಶಾಲಾ ಶಿಕ್ಷಕರೆಂದು ನಮೂದಾಗಿದ್ದಲ್ಲಿ ಪರಿಶೀಲಿಸಿ ಅಂತಹ ಪ್ರಕರಣಗಳನ್ನು ರದ್ದುಪಡಿಸುವುದು ಈ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಲಾಗಿರುತ್ತದೆ.

ಸುತ್ತೋಲೆಯ ಸಂಪೂರ್ಣ ಆದೇಶ ಡೌನ್ಲೋಡ್ ಮಾಡಿಕೊಳ್ಳಲು
logoblog

Thanks for reading Regarding computerizing and finalizing the service details of teaching officers/non-teaching employees in the EEDS software

Previous
« Prev Post

No comments:

Post a Comment

If You Have any Doubts, let me Comment Here