Regarding the provision of separate rest rooms for women employees working in government offices.
ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ.
ಪತ್ರದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸುವಂತೆ ಕೋರಲಾಗಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಕಛೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದು ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಈ ಕುರಿತು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇರುವ ಕುರಿತ ಮಾಹಿತಿಯನ್ನು ದಿನಾಂಕ 10.03.2025ರೊಳಗೆ ಅತೀ ತುರ್ತಾಗಿ ಒದಗಿಸುವಂತೆ ಕೋರಿದೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಿ ಕಛೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಒದಗಿಸುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿತ್ತು. ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಈ ಕುರಿತು ಪತ್ರವನ್ನು ಬರೆದಿದ್ದರು, ಪತ್ರದಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದರು.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಸರ್ಕಾರಿ ಕಛೇರಿಗಳಿಗೆ ನೀಡಿದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದ್ದು, ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡುಬಂದಿರುತ್ತದೆ ಮತ್ತು ಈ ಸಂಬಂಧ ಹಲವು ಮಹಿಳಾ ನೌಕರರ ಸಂಘಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ ಎಂದು ಹೇಳಿದ್ದರು.
ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗಾಗಿ ವಿಕಾಸಸೌಧದಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇದ್ದು, ಬೆಂಗಳೂರಿನ ಇತರೆ ಇಲಾಖೆಗಳ ಆಡಳಿತ ಕಛೇರಿಗಳಲ್ಲಿ ಈ ಸೌಲಭ್ಯ ಇರುವುದಿಲ್ಲ. ಮಹಿಳಾ ಸಿಬ್ಬಂದಿಗಳು ಹಲವು ದೈಹಿಕ ಮತ್ತು ಮಾನಸಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದರು.
No comments:
Post a Comment
If You Have any Doubts, let me Comment Here