Regarding the steps to be followed in the online process for filling up the posts vacated due to death, retirement, resignation and other reasons in state private aided high schools
ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು ಸುತ್ತೋಲೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(2)ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್‌ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪ್ರಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ.
ಉಲ್ಲೇಖ-5ರ ಸುತ್ತೋಲೆಯಲ್ಲಿ ದಿನಾಂಕ:28-10-2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ ಅದರಂತೆ ತಂತ್ರಾಂಶದ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ.
No comments:
Post a Comment
If You Have any Doubts, let me Comment Here